ತುಮಕೂರು :ಜಿಲ್ಲೆಯ ಶಿರಾ ತಾಲೂಕಿನ ಗ್ರಾಮವೊಂದರಲ್ಲಿ 16 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ವಿಷಯ ತಿಳಿದ ತಾಲೂಕು ಆಡಳಿತ ಸೋಂಕಿತರ ಮನವೊಲಿಸಿ ಆಸ್ಪತ್ರೆಗೆ ದಾಖಲಿಸಲು ಹರಸಾಹಸ ಪಟ್ಟಿದೆ.
ಗುಡ್ಡದಹಟ್ಟಿ ಗ್ರಾಮದಲ್ಲಿ ಮೊದಲಿಗೆ ಓರ್ವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿತ್ತು. ಒಂದು ವಾರದ ಅಂತರದಲ್ಲಿ ಬರೋಬ್ಬರಿಗೆ 16 ಮಂದಿಯಲ್ಲಿ ಸೋಂಕಿನ ಗುಣಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಕಾಣಿಸಿತ್ತು.
ವಿಷಯ ತಿಳಿದು ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿ, ಶಿರಾ ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ, ಶಾಸಕ ಡಾ. ರಾಜೇಶ್ ಗೌಡ, ತಹಶೀಲ್ದಾರ್ ಮಮತಾ ದೌಡಾಯಿಸಿದರು.
ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗುವಂತೆ ತಿಳಿಸಲಾಯಿತು. ಆದ್ರೆ, 16 ಮಂದಿ ಸೋಂಕಿತರು ಇದಕ್ಕೆ ಹಿಂದೇಟು ಹಾಕಿದರು. ಯಾವುದೇ ಕಾರಣಕ್ಕೂ ಆಸ್ಪತ್ರೆಗೆ ಬರೋದಿಲ್ಲ ಎಂದು ಪಟ್ಟು ಹಿಡಿದರು.