ತುಮಕೂರು :ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಕೇಂದ್ರದ ಬಿಜೆಪಿ ಮುಖಂಡರು ಕೈಗೆತ್ತಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣ ಇದೆ ಎಂದು ಹಲವು ಬಿಜೆಪಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅದು ಯಾವ ತಿರುವು ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡೋಣ ಎಂದು ತಿಳಿಸಿದರು.
ಆಪರೇಷನ್ ಕಮಲ.. ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಪರಮೇಶ್ವರ್ ಆಕ್ರೋಶ; ರಿವರ್ಸ್ ಕಮಲದ ಎಚ್ಚರಿಕೆ! - ತುಮಕೂರು
ಕೇಂದ್ರದ ಬಿಜೆಪಿ ಮುಖಂಡರು ಆಪರೇಷನ್ ಕಮಲದ ಜವಾಬ್ದಾರಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣ ಇದೆ ಎಂದು ಹಲವು ಬಿಜೆಪಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅದು ಯಾವ ತಿರುವು ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡೋಣ ಎಂದು ತಿಳಿಸಿದರು.
ಸರ್ಕಾರ ಸುಭದ್ರವಾಗಿದೆ ಎಂದು ರಾಜ್ಯದ ಜನತೆಗೆ ನಾನು ಹೇಳಲು ಇಷ್ಟಪಡುತ್ತೇನೆ ಎಂದು ಇದೇ ವೇಳೆ ಅವರು ಘೋಷಿಸಿದರು. ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಾಗಿಲ್ಲ. ಅದನ್ನು ಸ್ಪೀಕರ್ ರಮೇಶ್ ಕುಮಾರ್ ಅವರೆ ಸ್ಪಷ್ಟಪಡಿಸಬೇಕಿದೆ. ಅಕಸ್ಮಾತ್ ಅವರು ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಾದರೆ ಅವರೊಂದಿಗೆ ಕುರಿತು ಮಾತನಾಡುತ್ತೇವೆ. ಪರಿಸ್ಥಿತಿ ಹೀಗಿರುವಾಗ ಯಾಕೆ ಈ ರೀತಿ ಮಾಡಿದ್ದೀರಾ ಎಂದು ಕೇಳುತ್ತೇವೆ ಎಂದರು.
ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರದಲ್ಲಿ ಯಾಕೆ ನಾವು ರಾಜೀನಾಮೆ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿರುತ್ತಾರೆ ಎಂದು ಇದೇ ವೇಳೆ ತಿಳಿಸಿದರು. ಇನ್ನು ನಮ್ಮೊಂದಿಗೆ ಎಷ್ಟು ಜನ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಅಂತ ಸಚಿವ ಶ್ರೀನಿವಾಸ ಹೇಳಿದರು.