ಕರ್ನಾಟಕ

karnataka

ETV Bharat / state

ಮರಳಿ ಗೂಡು ಸೇರಿಕೊಳ್ಳಲು ಹಾತೊರೆಯುತ್ತಿರುವ ಹೊರ ರಾಜ್ಯದ ಕಾರ್ಮಿಕರು - immigrents workers

ಲಾಕ್​​ಡೌನ್​ನಿಂದಾಗಿ ಬೇರೆ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಸಿಲುಕಿವವರು ಮರಳಿ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅವಕಾಶ ನೀಡಿದೆ. ಆದರೆ ತುಮಕೂರಿನ ಎತ್ತಿನಹೊಳೆ ಕಾಮಗಾರಿಗಾಗಿ ಹೊರ ರಾಜ್ಯದಿಂದ ಆಗಮಿಸಿರುವ ಕಾರ್ಮಿಕರು ತಮ್ಮ ಸ್ವಂತ ಊರಿಗೆ ತರೆಳಲಾಗದೆ ಪರಿತಪಿಸುತ್ತಿದ್ದಾರೆ.

Out-of-state workers want to go for hometown in Tumkuru
ಮರಳಿ ಗೂಡು ಸೇರಿಕೊಳ್ಳಲು ಹಾತೊರೆಯುತ್ತಿರುವ ಹೊರ ರಾಜ್ಯದ ಕಾರ್ಮಿಕರು

By

Published : May 2, 2020, 6:51 PM IST

ತುಮಕೂರು: ಹೊರ ರಾಜ್ಯದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಇನ್ನೊಂದೆಡೆ, ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ಎತ್ತಿನಹೊಳೆ ಕಾಮಗಾರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಹೊರ ರಾಜ್ಯದ ಕಾರ್ಮಿಕರಿಗೆ ದಿಕ್ಕೇ ತೋಚದಂತಾಗಿದೆ.

20 ಮಂದಿ ಹೊರರಾಜ್ಯದ ಕಾರ್ಮಿಕರು ವಾಪಸ್ ತಮ್ಮ ಊರುಗಳಿಗೆ ತೆರಳಲು ಹೆಣಗಾಡುತ್ತಿದ್ದಾರೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್ ಮೂಲದ ಕಾರ್ಮಿಕರಾಗಿದ್ದು ಹಲವುದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದರೂ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ.

ಕಳೆದ ಎರಡು ತಿಂಗಳಿನಿಂದ ಗುತ್ತಿಗೆದಾರರಿಂದ ಯಾವುದೇ ರೀತಿಯ ವೇತನ ಕೂಡ ಬಂದಿಲ್ಲ, ಕೆಲಸ ಮಾಡಲು ಗುತ್ತಿಗೆದಾರರು ಒತ್ತಡ ಹೇರುತ್ತಿದ್ದಾರೆ. ತಮ್ಮ ಬಳಿ ಪಡಿತರ ಕೂಡ ಸಮರ್ಪಕವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ABOUT THE AUTHOR

...view details