ಕರ್ನಾಟಕ

karnataka

ETV Bharat / state

ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ... ಇದು ಪರಂ ಪ್ರತಿಕ್ರಿಯೆ - ex DCM parameshwar home raid

ನಾವು ತಪ್ಪು ಮಾಡಿದ್ದರೆ ಹೆದರಬೇಕು. ತಮ್ಮ ಒಡೆತನದ ಸಂಸ್ಥೆಗಳ ಮೇಲೆ ಐಟಿ ದಾಳಿ ಮಾಡಿದ್ದು, ಸಂತೋಷ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್​ ತಿಳಿಸಿದ್ದಾರೆ.

ಪರಮೇಶ್ವರ್​

By

Published : Oct 10, 2019, 11:08 AM IST

Updated : Oct 10, 2019, 11:34 AM IST

ತುಮಕೂರು:ನಾವು ತಪ್ಪು ಮಾಡಿದ್ದರೆ ಹೆದರಬೇಕು. ತಮ್ಮ ಒಡೆತನದ ಸಂಸ್ಥೆಗಳ ಮೇಲೆ ಐಟಿ ದಾಳಿ ಮಾಡಿದ್ದು ಸಂತೋಷ ಎಂದಿರುವ ಮಾಜಿ ಡಿಸಿಎಂ ಜಿ ಪರಮೇಶ್ವರ್​, ತಾವು ಕಾನೂನು ವಿರುದ್ಧವಾಗಿ ವಹಿವಾಟು ನಡೆಸಿದ್ದರೆ, ಐಟಿ ದಾಳಿಯ ಭಾಗವಾಗುತ್ತೇವೆ ಎಂದಿದ್ದಾರೆ.

ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಜಿ. ಪರಮೇಶ್ವರ್​

ಈ ಸಂಬಂಧ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಅವರು, ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಲಿ ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿಯನ್ನು ಹೊರಹಾಕಲಿ ಎಂದು ಅವರು ಐಟಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಲಾಖೆ ಹೀಗೆ ಮಾಡುವುದರಿಂದ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

Last Updated : Oct 10, 2019, 11:34 AM IST

ABOUT THE AUTHOR

...view details