ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ಐವರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರು ಬಸ್ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸಿಎಂಗೆ ಪರಮೇಶ್ವರ್ ಮನವಿ - ಜಿ. ಪರಮೇಶ್ವರ್
ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ಐವರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಜಿ. ಪರಮೇಶ್ವರ್
ಕೊರಟಗೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾನವೀಯತೆಯ ದೃಷ್ಟಿಯಿಂದ ಮೃತರ ಕುಟುಂಬದವರಿಗೆ ಪರಿಹಾರಧನ ನೀಡಬೇಕು. ಅಲ್ಲದೇ ಕನಿಷ್ಠ 5ಲಕ್ಷ ರೂ. ಪರಿಹಾರಧನ ಕೊಡಬೇಕೆಂದು ಆಗ್ರಹಿಸಿದರು.
ಈ ಘಟನೆಗೆ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕೊರಟಗೆರೆ ಮತ್ತು ತುಮಕೂರು ನಡುವೆ ರಸ್ತೆ ಉತ್ತಮವಾಗಿದೆ ಎಂದು ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಹೀಗಾಗಿ ಅದರತ್ತ ಅಧಿಕಾರಿಗಳು ಗಮನ ಹರಿಸಬೇಕು ಎಂದರು.