ಕರ್ನಾಟಕ

karnataka

ETV Bharat / state

ಚೇತರಿಸಿಕೊಂಡಿದ್ದ ರೋಗಿ ಆಸ್ಪತ್ರೆಯಲ್ಲೇ ಸಾವು: ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ - ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು

ಚಿಕಿತ್ಸೆ ಪಡೆದು ಗುಣಮುಖನಾಗುತ್ತಿದ್ದ ರೋಗಿ ವೈದ್ಯರ ನಿರ್ಲಕ್ಷ್ಯದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಪಾವಗಡ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು, Patient dies in hospital
ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು!

By

Published : Dec 7, 2019, 2:48 PM IST

ಪಾವಗಡ/ತುಮಕೂರು: ಚಿಕಿತ್ಸೆ ಪಡೆದು ಗುಣಮುಖನಾಗುತ್ತಿದ್ದ ರೋಗಿ ವೈದ್ಯರ ನಿರ್ಲಕ್ಷ್ಯದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಪಾವಗಡ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಿ.ಹೆಚ್ ಪಾಳ್ಯದ ನವವಿವಾಹಿತ ನವೀನ್(22) ಸಾವನ್ನಪ್ಪಿದ ವ್ಯಕ್ತಿ. ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದ್ದಾನೆಂದು ಮೃತನ ಪೋಷಕರು ಆರೋಪಿಸಿದ್ದು, ಕುಟುಂಬಸ್ಥರು ಪಾವಗಡ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕುಟುಂಬಸ್ಥರ ಪ್ರತಿಭಟನೆ

ಶುಕ್ರವಾರ ರಾತ್ರಿ ಆಸ್ಪತ್ರೆಯಲ್ಲಿ ನವೀನ್​ಗೆ ಯಾವುದೋ ಚಿಕಿತ್ಸೆ ನೀಡಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ನವೀನ್ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.

ABOUT THE AUTHOR

...view details