ತುಮಕೂರು :ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನೀಡುವ ಬದಲು, ಕನಿಷ್ಟ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಖಾಸಗಿ ಬಸ್ಗಳ ಪರ್ಮಿಟ್ ಕ್ಯಾನ್ಸಲ್ ಮಾಡುವ ನಿರ್ಧಾರವನ್ನು ಸಚಿವರು ವ್ಯಕ್ತಪಡಿಸುತ್ತಿದ್ದಾರೆ. ಇದರ ಬದಲು ಯಾವುದೇ ರೀತಿಯ ಲಾಭ-ನಷ್ಟ ನೋಡದೇ, ಪ್ರತಿ ಗ್ರಾಮಕ್ಕೂ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೆಚ್ಡಿಕೆ ಸರ್ಕಾರವನ್ನು ಒತ್ತಾಯಿಸಿದರು.
ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ನೀಡಿ ಎಂದ ಹೆಚ್ಡಿಕೆ ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯವನ್ನು ಹೆಚ್ಡಿಕೆ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಈ ಅವಘಡದ ಬಗ್ಗೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಅಲ್ಲದೆ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಕುರಿತಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಪಾವಗಡ ಅಪಘಾತ : ಬಸ್ನ ಮೇಲಿದ್ದರು 40ಕ್ಕೂ ಹೆಚ್ಚು ಮಂದಿ!