ತುಮಕೂರು: ಕರ್ತವ್ಯ ಲೋಪವೆಸಗಿದ ಪಾವಗಡ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ. ಐಜಿ ಚಂದ್ರಶೇಖರ್ ಆದೇಶದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಪಾವಗಡ ನಗರದಲ್ಲಿ ಮಟ್ಕಾ, ಜೂಜು ಹೆಚ್ಚಾಗುತ್ತಿದ್ದು, ಆರೋಪಿಗಳ ಜೊತೆ ಶಾಮೀಲಾಗಿದ್ದ ಗುರುತರ ಆರೋಪ ಪೊಲೀಸ್ ಇನ್ಸ್ಪೆಕ್ಟರ್ ಮೇಲಿದೆ.
ಕರ್ತವ್ಯ ಲೋಪ: ಪಾವಗಡ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು - Pavagada police lakshmikant suspended
ಪಾವಗಡ ನಗರದಲ್ಲಿ ಮಟ್ಕಾ, ಜೂಜು ಹೆಚ್ಚಾಗಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಆರೋಪಿಗಳ ಜೊತೆ ಶಾಮೀಲಾಗಿದ್ದಾರೆ ಎನ್ನುವ ಆರೋಪವಿದೆ. ಹೀಗಾಗಿ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಪಾವಗಡ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು