ತುಮಕೂರು:ಇದುವರೆಗೂ ಪದವಿ ಕಾಲೇಜುಗಳಲ್ಲಿ ಶೇ. 9 ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ತುಮಕೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಹಾಜರಾತಿ ಸಂಖ್ಯೆ ಏರಿಕೆಯಾಗಲಿದೆ. ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಬರ್ತಾ ಇದ್ದಾರೆ. ಆನ್ಲೈನ್ನಲ್ಲಿ ಯಾರಿಗೆ ಅರ್ಥ ಆಗಲ್ಲ ಅವರು ಕಾಲೇಜಿಗೆ ಬಂದು ಆಫ್ಲೈನ್ ಪಾಠ ಕೇಳಬಹುದು ಎಂದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಯಾಣ್ ಮುಂಜಾಗ್ರತೆ ವಹಿಸಿ ಸ್ಕ್ರೀನಿಂಗ್ ಮಾಡಿರುವುದು ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸ್ಕ್ರೀನಿಂಗ್ನಿಂದ 170 ರಷ್ಟು ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದರು.
ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ನಮ್ಮ ಸಹಮತವಿದೆ. ರಚನೆ ಆಗಲೇಬೇಕು ಈ ಕುರಿತಂತೆ ಸರ್ಕಾರದ ಗಮನಕ್ಕೂ ತರುತ್ತೇನೆ ಎಂದು ತಿಳಿಸಿದರು.
ಕಾನೂನು ಚೌಕಟ್ಟಿನಲ್ಲಿ ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.