ತುಮಕೂರು:ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಖಾಸಗಿ ಬಸ್ಗಳ ಓಡಾಟಕ್ಕೆ ಜಿಲ್ಲೆಯಲ್ಲಿ ಚಾಲನೆ ಸಿಕ್ಕಿದೆ. ತುಮಕೂರು ನಗರದಿಂದ ಮಧುಗಿರಿ ಹಾಗೂ ಕುಣಿಗಲ್ ಮಾರ್ಗವಾಗಿ ಖಾಸಗಿ ಬಸ್ಗಳ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ.
ತುಮಕೂರಿನಲ್ಲಿ ಖಾಸಗಿ ಬಸ್ಗಳ ಸಂಚಾರಕ್ಕೆ ಅನುಮತಿ - ಖಾಸಗಿ ಬಸ್ಗಳ ಓಡಾಟ
ತುಮಕೂರು ಜಿಲ್ಲೆಯಲ್ಲಿ ತುಮಕೂರು ನಗರದಿಂದ ಮಧುಗಿರಿ ಹಾಗೂ ಕುಣಿಗಲ್ ಮಾರ್ಗವಾಗಿ ಖಾಸಗಿ ಬಸ್ಗಳ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ.
ಖಾಸಗಿ ಬಸ್ಗಳ ಓಡಾಟ
ಪ್ರತಿ ಬಸ್ಗೆ ಕನಿಷ್ಠ 32 ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಸೂಚಿಸಲಾಗಿದೆ. ಆದರೆ ಪ್ರಯಾಣಿಕರು ಖಾಸಗಿ ಬಸ್ಗಳಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಬಸ್ಗಳ ಸಂಚಾರ ಆರಂಭವಾಗಿಲ್ಲ.