ಕರ್ನಾಟಕ

karnataka

ETV Bharat / state

ತುಮಕೂರು: 61 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಪತ್ತೆ - ಸಿದ್ದಗಂಗಾ ಖಾಸಗಿ ಆಸ್ಪತ್ರೆ

ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ ಕೋವಿಡ್​ ದೃಢಪಟ್ಟಿದೆ.

person-tested-positive-for-covid-in-tumkur
ತುಮಕೂರಿನಲ್ಲಿ 61 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಪತ್ತೆ

By

Published : Dec 28, 2022, 10:44 PM IST

ತುಮಕೂರು: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ನಗರದ ಸಿದ್ದಗಂಗಾ ಬಡಾವಣೆಯ 61 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಸಿದ್ದಗಂಗಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಜುನಾಥ್ ಪ್ರತಿಕ್ರಿಯಿಸಿ, ಕೋವಿಡ್‌ ಸೋಂಕು ತಗುಲಿರುವ ವ್ಯಕ್ತಿಯ ಮೇಲೆ ನಿಗಾ ಇರಿಸಲಾಗಿದೆ. ಇದುವರೆಗೂ ಯಾವ ತಳಿ ಎಂದು ದೃಢಪಟ್ಟಿಲ್ಲ. ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೋವಿಡ್ ಆತಂಕ: ಕೊಡಗಿನ ಪ್ರವಾಸಿ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ

ABOUT THE AUTHOR

...view details