ತುಮಕೂರು: ಕೊರೊನಾ ವೈರಸ್ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದು, ಸೋಂಕಿನಿಂದ ಗುಣಮುಖರಾಗಿರುವವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೋವಿಡ್-19 ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ಬಾರಿಗೆ ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಡಾ. ಯು.ಎಸ್.ವಿಶಾಲ್ ರಾವ್ ನೇತೃತ್ವದ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಸಿದ್ಧವಾಗಿದೆ. ಆದ್ದರಿಂದ ರಾಜ್ಯದಲ್ಲಿ 489 ಪಾಸಿಟಿವ್ ಪ್ರಕರಣಗಳಲ್ಲಿ 153 ಜನರು ಗುಣಮುಖರಾಗಿದ್ದಾರೆ. ಇವರನ್ನು ಸಂಪರ್ಕ ಮಾಡುತ್ತಿದ್ದೇವೆ. ಇವರು 15 ದಿನಕ್ಕೊಮ್ಮೆ ರಕ್ತ ನೀಡಬಹುದು. ಗುಣಮುಖರಾದವರು ಸ್ವಯಂ ಪ್ರೇರಣೆಯಿಂದ ಬಂದು ನಮಗೆ ಸಹಕಾರ ನೀಡಬೇಕೆಂದು ಹೇಳಿದ್ರು.