ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತುಮಕೂರಿನಲ್ಲಿ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ: ಹೇಗಿತ್ತು ರೆಸ್ಪಾನ್ಸ್? - latest news of tumkur
ತುಮಕೂರಿನಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತುಮಕೂರು ಬಹಳಷ್ಟು ಪ್ಲಾಸ್ಟಿಕ್ನಿಂದ ಕಲುಷಿತಗೊಂಡಿದ್ದು, ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕೆಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವ ಉದ್ದೇಶದಿಂದ ಈ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಂದು ವಾರಗಳ ಕಾಲ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಿಸುತ್ತಿರುವುದರ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ, ಸಾರ್ವಜನಿಕರೆಲ್ಲರೂ ನಮ್ಮ ಜೊತೆ ಕೈಜೋಡಿಸಿದರೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದರು.
ಶಾಸಕ ಜ್ಯೋತಿಗಣೇಶ್ ಮಾತನಾಡಿ, ಗಾಂಧೀಜಿಯವರ 150ನೇ ಜನ್ಮದಿನಾಚರಣೆ ನಿಮಿತ್ತ ಪ್ರಧಾನಿ ಮೋದಿಯವರು ಪ್ಲಾಸ್ಟಿಕ್ ನಿಷೇಧ ಜನಾಂದೋಲನ ಕಾರ್ಯಕ್ರಮ ಮಾಡುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರೂ ಸೇರಿ ಜನಾಂದೋಲನ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸುರಿದಂತಹ ಮಳೆಯಿಂದಾಗಿ ನಗರದ ಎಲ್ಲ ಚರಂಡಿಗಳಲ್ಲಿ ಶೇಕಡ 20ರಷ್ಟು ಭಾಗ ಪ್ಲಾಸ್ಟಿಕ್ ಕವರ್ಗಳಿಂದಲೇ ತುಂಬಿಕೊಂಡಿತ್ತು. ಇದರಿಂದ ತುಮಕೂರು ನಗರ ಎಷ್ಟು ಕಲುಷಿತಗೊಂಡಿದೆ ಎಂದು ತಿಳಿಯುತ್ತದೆ. ಹಾಗಾಗಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.