ತುಮಕೂರು:ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ನಿಧಿ ಶೋಧ ಮಾಡಲು ಪೂಜಾ ಸಾಮಗ್ರಿಗಳೊಂದಿಗೆ ಗುಂಡಿ ತೆಗೆಯಲು ಪ್ರಯತ್ನಿಸುತ್ತಿದ್ದ 10 ಮಂದಿ ಆರೋಪಿಗಳನ್ನು ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ.
ಶಿರಾ ತಾಲೂಕಿನ ಗಾಣದಹುಣಸೆ ಸರ್ವೆ ನಂಬರ್ 25ರ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ಪೂಜಾ ಸಾಮಗ್ರಿಗಳನ್ನು ಬಳಸಿ ನಿಧಿ ಶೋಧಿಸಲು ಪ್ರಯತ್ನಿಸಲಾಗಿದೆ ಎಂದು ರಾಜಸ್ವ ನಿರೀಕ್ಷಕ ಶ್ರೀನಿವಾಸ್ ಅವರು ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.