ತುಮಕೂರು : ಮುತ್ತು ಮಾರಮ್ಮ ದೇವಿ ಮೆರವಣಿಗೆ ವೇಳೆ ಎರಡು ಕೋಮಿನ ನಡುವೆ ಮಾತಿಗೆ ಮಾತು ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ತುಮಕೂರು ನಗರದ ಮರಳೂರು ದಿಣ್ಣೆ ಪ್ರದೇಶದಲ್ಲಿ ನಡೆದಿದೆ.
ಎರಡು ಕೋಮಿನ ನಡುವೆ ಗಲಾಟೆ: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - Tumakuru
ಮೆರವಣಿಗೆ ವೇಳೆ ಒಂದು ಕೋಮಿನ ಗುಂಪು ಡಿಜೆ ಬಳಸಿ ಡ್ಯಾನ್ಸ್ ಮಾಡಿದ್ದಕ್ಕೆ ಮತ್ತೊಂದು ಕೋಮಿನವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ ಕೈಮೀರಿ ಹಿನ್ನೆಲೆ ಎರಡು ಗುಂಪುಗಳ ನಡುವೆ ಪರಸ್ಪರ ನೂಕಾಟ ತಳ್ಳಾಟ ನಡೆದಿದೆ.

ಮೆರವಣಿಗೆ ವೇಳೆ ಒಂದು ಕೋಮಿನ ಗುಂಪು ಡಿಜೆ ಬಳಸಿ ಡ್ಯಾನ್ಸ್ ಮಾಡಿದ್ದಕ್ಕೆ ಮತ್ತೊಂದು ಕೋಮಿನವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ನೂಕಾಟ ತಳ್ಳಾಟ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಜಯನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ವೇಳೆ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದನ್ನು ಖಂಡಿಸಿ ಒಂದು ಕೋಮಿನವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಭೇಟಿ ನೀಡಿ, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜನೆ ಮಾಡಿದ್ದರು.
TAGGED:
Tumakuru