ಕರ್ನಾಟಕ

karnataka

ETV Bharat / state

ಸಚಿವ ಬಿ.ಸಿ ನಾಗೇಶ್ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ : ಸ್ಥಳಕ್ಕೆ ಐಜಿಪಿ ಭೇಟಿ, ಪರಿಶೀಲನೆ - ನಾಗೇಶ್ ಮನೆಗೆ ಐಜಿಪಿ ಭೇಟಿ

ತಿಪಟೂರಿನಲ್ಲಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಎನ್ಎಸ್​ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಣ ಸಚಿವರ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಐಜಿಪಿ ಚಂದ್ರಶೇಖರ್ ಹಾಗೂ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಸಚಿವ ಬಿ.ಸಿ ನಾಗೇಶ್ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಸಚಿವ ಬಿ.ಸಿ ನಾಗೇಶ್ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

By

Published : Jun 2, 2022, 11:50 AM IST

ತುಮಕೂರು: ತಿಪಟೂರಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಹಾಗೂ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ನಿನ್ನೆ ನಡೆದ ಎನ್​ಎಸ್​ಯುಐ ದಾಂಧಲೆ ಹಿನ್ನೆಲೆ ಬಿ.ಸಿ. ನಾಗೇಶ್ ಮನೆ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 15 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತಷ್ಟು ಜನರನ್ನ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಈಗಾಗಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕಾರ್ಯಕರ್ತರ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.

ಸಚಿವ ಬಿ.ಸಿ ನಾಗೇಶ್ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಿಪಟೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ದಾಕ್ಷಾಯಿಣಿ ದೂರು ನೀಡಿದ್ದಾರೆ.

ಇದನ್ನೂ ಓದಿ:ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

ABOUT THE AUTHOR

...view details