ತುಮಕೂರು:ಫೋನ್ ಕದ್ದಾಲಿಕೆ ಪ್ರಕ್ರಿಯೆಯು ಈ ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಾಮಾನ್ಯವಾಗಿರುವಂತಹುದು ಎಂದು ಶಿರಾ ಜೆಡಿಎಸ್ ಶಾಸಕ ಸತ್ಯನಾರಾಯಣ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವರಿಗೆ ನೇರವಾಗಿ ಕಾನೂನು ವ್ಯಾಪ್ತಿಯಲ್ಲಿಯೇ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿರುತ್ತದೆ. ಆದ್ರೆ ಕೆಲವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂದರು.
ಫೋನ್ ಕದ್ದಾಲಿಕೆ ಸಾಮಾನ್ಯ, ಆದ್ರೆ ಕೆಲವರಿಂದ ದುರುಪಯೋಗ: ಶಾಸಕ ಸತ್ಯನಾರಾಯಣ - latest news of tumkur
ಅಧಿಕಾರದಲ್ಲಿರುವರಿಗೆ ನೇರವಾಗಿ ಕಾನೂನು ವ್ಯಾಪ್ತಿಯಲ್ಲಿಯೇ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿರುತ್ತದೆ. ಆದ್ರೆ ಕೆಲವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆಂದು ಶಿರಾ ಜೆಡಿಎಸ್ ಶಾಸಕ ಸತ್ಯನಾರಾಯಣ ಹೇಳಿದ್ದಾರೆ.
ಮಾಜಿ ಸಚಿವ ಶ್ರೀನಿವಾಸ್ ಅವರ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿತ್ತು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸತ್ಯನಾರಾಯಣ, ಯಾವ ರೀತಿಯ ನಿಗೂಢತೆ ಇತ್ತು ಎಂಬುದನ್ನು ಮಾಜಿ ಸಚಿವ ಶ್ರೀನಿವಾಸ್ ಸ್ಪಷ್ಟಪಡಿಸಲಿ ಎಂದು ಹೇಳಿದರು.
ಒಕ್ಕಲಿಗರ ಹೋರಾಟಕ್ಕೆ ಹೆಚ್.ಡಿ ಕುಮಾರಸ್ವಾಮಿ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ಅವರನ್ನು ಗೌರವಯುತವಾಗಿ ಹೊರಾಟಕ್ಕೆ ಕರೆದಿದ್ದರೆ ಭಾಗವಹಿಸುತ್ತಿದ್ದರು ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಪ್ರಕರಣವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಲಾಗುತ್ತಿದೆ. ದೇಶದಲ್ಲಿ ಇಂತಹ ಹಲವಾರು ಪ್ರಕರಣಗಳಿವೆ. ಅಂತಹ ಪ್ರಕರಣಗಳಿಗೆ ತೆಗೆದುಕೊಳ್ಳದ ಕಠಿಣ ಕ್ರಮ ಇಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದರು.