ತುಮಕೂರು:ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಜನವರಿ 9ರಂದು ವಿವಿಧೆಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಜ. 9ರಂದು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ: ವಾಟಾಳ್ ನಾಗರಾಜ್
ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜ. 9ರಂದು ರಾಜ್ಯದ 500ಕ್ಕೂ ಹೆಚ್ಚು ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್
ತುಮಕೂರಿನಲ್ಲಿ ರೈಲ್ವೆ ನಿಲ್ದಾಣದ ಎದುರು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಗಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಲಾಗಿದೆ. ಹೀಗಿದ್ದರೂ ಅದಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಹಾಗಾಗಿ ಪ್ರಾಧಿಕಾರವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಜ. 9ರಂದು ರಾಜ್ಯದ 500ಕ್ಕೂ ಹೆಚ್ಚು ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.