ತುಮಕೂರು:ಬೆಂಗಳೂರಿನಿಂದ ಬಂದವರನ್ನು ಮನೆಗೆ ಸೇರಿಸಿಕೊಂಡಿದ್ದರಿಂದಲೇ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ನಿರ್ಬಂಧಿತ ವಲಯಗಳಲ್ಲಿ ಬೇಕಾಬಿಟ್ಟಿ ಓಡಾಡಿದರೆ ಕ್ರಮ: ಸಚಿವ ಮಾಧುಸ್ವಾಮಿ ಎಚ್ಚರಿಕೆ
ಕಂಟೈನ್‌ಮೆಂಟ್ ಝೋನ್ಗಳಲ್ಲಿ ಅನಗತ್ಯವಾಗಿ ಓಡಾಡುವುದು ಕಂಡು ಬಂದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದರು.
ಪಿಪಿಇ ಕಿಟ್ ವಿತರಣೆ
ಪೊಲೀಸರಿಗೆ ಪಿಪಿಇ ಕಿಟ್ ವಿತರಿಸಿದ ನಂತರ ಮಾತನಾಡಿದ ಅವರು, ಕಂಟೈನ್‌ಮೆಂಟ್ ವಲಯಗಳಲ್ಲಿ ಕಠಿಣವಾದ ನಿಯಮಗಳನ್ನು ಪಾಲಿಸಲಾಗುತ್ತಿದೆ. ಇಲ್ಲಿ ಸುಖಾಸುಮ್ಮನೆ ಓಡಾಡಿದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಸಚಿವರು ಖಡಕ್ ಆಗಿ ಹೇಳಿದ್ದಾರೆ.
ಬೇರೆ ಊರುಗಳಿಂದ ಗ್ರಾಮಗಳಿಗೆ ಬಂದವರ ವರದಿಯನ್ನು 48 ಗಂಟೆಯೊಳಗೆ ಕೊಡಲಾಗುವುದು. ಅಲ್ಲಿಯವರೆಗೂ ಅವರನ್ನು ಹೊರಗಿರುವಂತೆ ನೋಡಿಕೊಳ್ಳಬೇಕು. ಸೋಂಕಿತರು ಮಾಹಿತಿಯನ್ನು ಮುಚ್ಚಿಟ್ಟರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.