ಕರ್ನಾಟಕ

karnataka

ETV Bharat / state

ಹೆಚ್​ಡಿಡಿ, ಹೆಚ್​ಡಿಕೆ ವಿರುದ್ಧ ಪ್ರಸನ್ನಾನಂದಪುರಿ ಶ್ರೀ ಹೇಳಿಕೆ: ಒಕ್ಕಲಿಗರ ಒಕ್ಕೂಟದಿಂದ ಆಕ್ರೋಶ

ಬೆಂಗಳೂರಿನಲ್ಲಿ ಇತ್ತೀಚಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಕುರಿತಂತೆ ವಾಲ್ಮೀಕಿ ಸಮುದಾಯದವರು ಕರೆದಿದ್ದ ಪ್ರತಿಭಟನೆಯಲ್ಲಿ ಪ್ರಸನ್ನಾನಂದಪುರಿ ಸ್ವಾಮೀಜಿ  ಅವರು ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ದ ನೀಡಿರುವ ಹೇಳಿಕೆಗೆ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಸಿಎಂ ವಿರುದ್ಧದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆ ಹಿಂಪಡೆಯಲು ಆಗ್ರಹ

By

Published : Jun 27, 2019, 2:30 AM IST

ತುಮಕೂರು: ವಾಲ್ಮೀಕಿ ಸಮಾಜದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಅವಹೇಳನಕಾರಿಯಾಗಿ ಮಾತುಗಳನ್ನು ಆಡಿರುವುದು ಒಕ್ಕಲಿಗ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ತುಮಕೂರು ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಮುಖಂಡ ಬೋರೇಗೌಡ ತಿಳಿಸಿದ್ದಾರೆ.

ಸ್ವಾಮೀಜಿ ಹೇಳಿಕೆ ಹಿಂಪಡೆಯಲು ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಇತ್ತೀಚಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಕುರಿತಂತೆ ವಾಲ್ಮೀಕಿ ಸಮುದಾಯದವರು ಸಭೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರಸನ್ನಾನಂದಪುರಿ ಸ್ವಾಮೀಜಿ ದೇವೇಗೌಡರ ವಿರುದ್ದ ಕೆಟ್ಟ ಪದ ಬಳಸಿದ್ದಾರೆ. ಅವರ ಸ್ಥಾನದ ಘನತೆ ಮೀರಿ ಮಾತನಾಡಿರುವುದು ಸ್ವಾಮೀಜಿಗೆ ಶೋಭೆ ತರುವಂತಹದಲ್ಲ.ಕೂಡಲೇ ತಮ್ಮ ಮಾತನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವಾದ್ರೆ ಸ್ವಾಮೀಜಿ ವಿರುದ್ಧ ರಾಜ್ಯದೆಲ್ಲೆಡೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘ , ಜಿಲ್ಲಾ ಕುಂಚಿಟಿಗ ಒಕ್ಕಲಿಗರ ಸಂಘ, ಉಪ್ಪಿನ ಕೊಳಗ ಒಕ್ಕಲಿಗರ ಸಂಘ , ಬೈರವಿ ಮಹಿಳಾ ಸಂಘ, ಕೆಂಗಲ್ ಸ್ನೇಹ ಸಮಿತಿ, ತುಮಕೂರು ಜಿಲ್ಲಾ ಒಕ್ಕಲಿಗರ ನೌಕರರ ವೇದಿಕೆ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.


ABOUT THE AUTHOR

...view details