ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆಗಾಗಿ ತುಮಕೂರು ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎಣಿಕೆ ಕಾರ್ಯ ನವೆಂಬರ್ 10ರಂದು ಬೆಳಗ್ಗೆ 8ಕ್ಕೆ ಆರಂಭವಾಗಲಿದೆ. ಒಟ್ಟು 1,77,645 ಮತಚಲಾವಣೆಯಾಗಿದ್ದು ಅದರಲ್ಲಿ 92,077 ಪುರುಷರು, 85,568 ಮಹಿಳೆಯರು ಮತ ಚಲಾಯಿಸಿದ್ದಾರೆ.
ಮತ ಎಣಿಕೆ ಕಾರ್ಯ ಕ್ಕೆ 14 ಟೇಬಲ್ ವ್ಯವಸ್ಥೆ ಮಾಡಲಾಗಿದ್ದು ಪ್ರತಿ ಟೇಬಲ್ಗೆ ತಲಾ ಒಬ್ಬ ಮೇಲ್ವಿಚಾರಕ ಸಹಾಯಕ ಹಾಗೂ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ 4 ಟೇಬಲ್ ಗಳಲ್ಲಿ ನಡೆಯಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ಟೇಬಲ್ಗೆ ಅಭ್ಯರ್ಥಿ, ಒಬ್ಬ ಏಜೆಂಟ್ ಹಾಜರಿರಲು ಅವಕಾಶ ಕಲ್ಪಿಸಿಕೊಡಲಾಗಿದೆ ಈಗಾಗಲೇ ಏಜೆಂಟರಿಗೆ ಪಾಸ್ ಕೂಡ ವಿತರಣೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.