ಕರ್ನಾಟಕ

karnataka

ETV Bharat / state

ಖಾಸಗಿ ಬಸ್ - ಓಮಿನಿ ಕಾರು ಡಿಕ್ಕಿ.. ಇಬ್ಬರ ಸಾವು, 10 ಮಂದಿಗೆ ಗಾಯ - ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ

ತುಮಕೂರು ತಾಲೂಕಿನ ಮರಳೂರು ಕೆರೆ ಏರಿ ಮೇಲೆ ಖಾಸಗಿ ಬಸ್​ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಖಾಸಗಿ ಬಸ್ - ಓಮಿನಿ ಕಾರು ಡಿಕ್ಕಿ
ಖಾಸಗಿ ಬಸ್ - ಓಮಿನಿ ಕಾರು ಡಿಕ್ಕಿ

By ETV Bharat Karnataka Team

Published : Nov 2, 2023, 9:26 PM IST

ತುಮಕೂರು : ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮರಳೂರು ಕೆರೆ ಏರಿ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ತುಮಕೂರು ತಾಲೂಕಿನ ಮಾನಂಗಿ ಗ್ರಾಮದ ನಿವಾಸಿ ಸುರೇಶ್ ಹಾಗೂ ಸುಮಾ ಎಂದು ಗುರುತಿಸಲಾಗಿದೆ. ಅಲ್ಲದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 10 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಗಂಗಲಕ್ಷ್ಮಮ್ಮ, ವರಲಕ್ಷ್ಮಿ, ಚಿಕ್ಕನಾಯಮ್ಮ, ಗೀತಾ, ಸರೋಜಾ, ಕುಮಾರ್ , ಆಂಜನಪ್ಪ, ಶಶಿಕಲಾ, ರೇಖಾ, ಅನುಪಮಾ ಎಂದು ಗುರುತಿಸಲಾಗಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಕುಣಿಗಲ್ ಕಡೆಯಿಂದ ತುಮಕೂರು ನಗರದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಈಗಾಗಲೇ ಖಾಸಗಿ ಬಸ್ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಬೈಕ್​-ಲಾರಿ ಮುಖಾಮುಖಿ ಡಿಕ್ಕಿ: ನವವಿವಾಹಿತೆ ಸೇರಿ ನೇಪಾಳ ಮೂಲದ ಒಂದೇ ಕುಟುಂಬದ ಐವರ ಸಾವು

ABOUT THE AUTHOR

...view details