ತುಮಕೂರು: ನೀತಿ- ನಿಯಮ, ಯೋಜನೆಗಳು ಅಂದಿನ ಪ್ರಸ್ತುತತೆಗೆ ಪಕ್ವವಾಗಿರಬೇಕಿದೆ. ಇಲ್ಲವಾದಲ್ಲಿ ಆ ಕಾನೂನು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತದೆ. ಆ ನಿಟ್ಟಿನಲ್ಲಿ ಸಂವಿಧಾನವನ್ನು ಆಯಾ ಕಾಲ ಘಟ್ಟಕ್ಕೆ ತಿದ್ದುಪಡಿ ಮಾಡುವ ಮೂಲಕ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗೆ ಸರಿದೂಗುವಂತೆ ಮಾಡಲಾಗುತ್ತಿದೆ. ಸಂವಿಧಾನದಲ್ಲಿ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೈ.ಎಸ್. ಸಿದ್ದೇಗೌಡ ತಿಳಿಸಿದರು.
ಸಂವಿಧಾನ ದತ್ತ ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ಕುಲಪತಿ ವೈ.ಎಸ್. ಸಿದ್ದೇಗೌಡ
ಸಂವಿಧಾನದಲ್ಲಿ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೈ.ಎಸ್. ಸಿದ್ದೇಗೌಡ ತಿಳಿಸಿದರು.
ಜಿಲ್ಲಾಡಳಿತ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ "ಒಂದು ದೇಶ ಒಂದು ಸಂವಿಧಾನ" ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢವಾಗಿ ಮಾಡುವ ಕಾರ್ಯದಲ್ಲಿ ಸಫಲತೆಯನ್ನು ಕಾಣುತಿದ್ದರೆ ಅದಕ್ಕೆ ಸಂವಿಧಾನವೇ ಕಾರಣ. 70 ವರ್ಷದ ಹಿಂದೆ ಬಂದಂತಹ ಸಂವಿಧಾನ ಆಗಿನ ಸಾಮಾಜಿಕ, ಆರ್ಥಿಕ ಹಿನ್ನಲೆಯ ಆಧಾರದ ಮೇಲೆ ರಚನೆ ಆಗಿರುವಂತಹದ್ದು. ಈಗ ಕಳೆದಿರುವ ವರ್ಷಗಳಲ್ಲಿ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ. ನೀತಿ, ನಿಯಮ, ಯೋಜನೆಗಳು ಅಂದಿನ ಪ್ರಸ್ತುತತೆಗೆ ಪಕ್ವವಾಗಿರಬೇಕಿದೆ. ಇಲ್ಲವಾದಲ್ಲಿ ಆ ಕಾನೂನು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತದೆ. ಆ ನಿಟ್ಟಿನಲ್ಲಿ ಸಂವಿಧಾನವನ್ನು ಆಯಾ ಕಾಲ ಘಟ್ಟಕ್ಕೆ ತಿದ್ದುಪಡಿ ನಡೆಯುತ್ತಿದೆ. ಆ ಮೂಲಕ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗೆ ಸರಿದೂಗುವಂತೆ ಮಾಡಲಾಗುತ್ತಿದೆ. ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ ಎಂದು ಬೇರೆಯವರಿಗೆ ಧಕ್ಕೆ ತರುವಂತಹದಲ್ಲ. ಯಾರಿಗೂ ಕೆಡಕಾಗದ ರೀತಿಯಲ್ಲಿ ಜೀವಿಸಬೇಕಿದೆ. ಆ ನಿಟ್ಟಿನಲ್ಲಿ ನಮ್ಮ ಸಾಮಾಜಿಕ ಹೊಣೆಗಾರಿಕೆಯಿದ್ದು, ಸಾಧನೆಯ ಹಾದಿಯಲ್ಲಿ ಸಾಗಬೇಕಿದೆ ಎಂದರು.
ಇನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.