ತುಮಕೂರು :ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್-19 ಟೆಸ್ಟ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದಕ್ಕೆ ಶ್ರಮಿಸಿರುವ ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಭೀತಿ ಉಂಟಾಗದಂತೆ ಒಮ್ಮೆ ಟೆಸ್ಟ್ಗೆ ಒಳಪಡಿಸುವಂತೆ ಆದೇಶಿಸಿದರು.