ತುಮಕೂರು:ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಇದರಿಂದ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಇಂತಿಯಾಜ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ - ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ತುಮಕೂರಿನ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ನ ಅಸಂಘಟಿತ ಕಾರ್ಮಿಕ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಇಂತಿಯಾಜ್ ಅಹಮದ್ ಮಾತನಾಡಿ, ಅಚ್ಚೇ ದಿನ್ ಬರುತ್ತದೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳುವ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ, ಅಂದಿನಿಂದಲೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಇದರಿಂದ ರೋಸಿ ಹೋಗಿರುವ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಅಸಂಘಟಿತ ಕಾರ್ಮಿಕರಿಗೆ ಉಪಯೋಗವಾಗುವಂತಹ ಕಾನೂನುಗಳನ್ನು ಜಾರಿಗೊಳಿಸಿ. ಇಲ್ಲವಾದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೇರೆಯವರಿಗೆ ಆಡಳಿತ ನಡೆಸಲು ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.