ತುಮಕೂರು:ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಮಹಾನಗರ ಪಾಲಿಕೆ ಎದುರು ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಸಿತು.
ಬೀದಿ ಬದಿ ಮಳಿಗೆ ತೆರವು: ಪಾಲಿಕೆ ವಿರುದ್ಧ ಪ್ರತಿಭಟನೆ - ತುಮಕೂರು ಮಹಾನಗರ ಪಾಲಿಕೆ ವಿರುದ್ಧ ಪ್ರತಿಭಟನೆ
ತುಮಕೂರು ಮಹಾನಗರ ಪಾಲಿಕೆ ಏಕಾಏಕಿ ಬೀದಿಬದಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರಶಾಂತ ಚಿತ್ರಮಂದಿರ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದು ಹೋಗುವ ರಸ್ತೆ ಹಾಗೂ ಜೆ.ಸಿ ರಸ್ತೆಯ ಹಳೆ ಮಾರುಕಟ್ಟೆ ಮುಂಭಾಗದಲ್ಲಿ 15 ವರ್ಷಗಳಿಂದ ಪಾದಚಾರಿ ಮಾರ್ಗದ ಬಳಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದು, ಜೀವನಾಧಾರವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಿದ್ದು ಹಲವು ಸಮಸ್ಯೆಗಳನ್ನು ತಂದೊಡ್ಡಿದೆ.
ಮಳಿಗೆ ತೆರವಿನಿಂದ ಸುಮಾರು ಎರಡು ಸಾವಿರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್ ಆಗ್ರಹಿಸಿದರು.