ತುಮಕೂರು :ನಗರದ ವಂಚಿತ ಸಮುದಾಯಗಳ 281 ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರಿ ಭೂಮಿ ಮಂಜೂರಾತಿಗೆ ಒತ್ತಾಯಿಸಿ ಪ್ರತಿಭಟನೆ
ಕಳೆದ ಇಪ್ಪತ್ತು ವರ್ಷಗಳಿಂದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ದುಡಿಯುವ ಹಣದಲ್ಲಿ ಶೇ.50ರಷ್ಟು ಬಾಡಿಗೆಗೆ ವ್ಯಯವಾಗುತ್ತಿದೆ. ಇದೀಗ ಕೊರೊನಾ ಹಿನ್ನೆಲೆ ಕೆಲಸ ಸಿಗದೇ ದುಡಿಯಲು ಸಾಧ್ಯವಾಗುತ್ತಿಲ್ಲ..
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶದಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಿರುವ 281 ಕುಟುಂಬಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿವೆ.
ಕಳೆದ ಇಪ್ಪತ್ತು ವರ್ಷಗಳಿಂದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ದುಡಿಯುವ ಹಣದಲ್ಲಿ ಶೇ.50ರಷ್ಟು ಬಾಡಿಗೆಗೆ ವ್ಯಯವಾಗುತ್ತಿದೆ. ಇದೀಗ ಕೊರೊನಾ ಹಿನ್ನೆಲೆ ಕೆಲಸ ಸಿಗದೇ ದುಡಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳ ಅಡಿ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕೆಂದು ಒತ್ತಾಯಿಸಲಾಯಿತು.