ತುಮಕೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭದ್ರಮ್ಮ ಸರ್ಕಲ್ ಬಳಿ ಅನಂತ್ ಕುಮಾರ್ ಹೆಗಡೆ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಲಾಯಿತು.
ಸಂಸದ ಹೆಗಡೆ ಹೇಳಿಕೆ ವಿರೋಧಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ - ಸಂಸದ ಅನಂತ ಕುಮಾರ್ ಹೆಗಡೆ ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ
ಸಂಸದ ಅನಂತ ಕುಮಾರ್ ಹೆಗಡೆ ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
![ಸಂಸದ ಹೆಗಡೆ ಹೇಳಿಕೆ ವಿರೋಧಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ Protest from the congress](https://etvbharatimages.akamaized.net/etvbharat/prod-images/768-512-5993226-thumbnail-3x2-vicky.jpg)
ಕಾಂಗ್ರಸ್ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರಸ್ ಕಾರ್ಯಕರ್ತರ ಪ್ರತಿಭಟನೆ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಬಿಜೆಪಿ ಪಕ್ಷದವರಿಗೆ ಮಾನ, ಮರ್ಯಾದೆ ಇದ್ದರೆ ಆ ಸಂಸದರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಹಾಗೆ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.
ಸ್ವಾತಂತ್ರ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರ ಬಗ್ಗೆ ಮಾತನಾಡಲು ಬಿಟ್ಟಿರುವುದೇ ತಪ್ಪು. ಬಿಜೆಪಿ ಪಕ್ಷದ ಅಜೆಂಡಾ ಏನು ಎಂಬುದನ್ನು ಜನರ ಮುಂದೆ ಹೇಳಬೇಕಿದೆ. ಸಿಎಎ ಜಾರಿಗೆ ತಂದು ದೇಶವನ್ನು ಇಬ್ಭಾಗ ಮಾಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.