ತುಮಕೂರು :ಹಥ್ರಾಸ್ ಯುವತಿಯ ಅತ್ಯಾಚಾರ, ಕೊಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಹಥ್ರಾಸ್ ಯುವತಿಯ ಅತ್ಯಾಚಾರ, ಕೊಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ - ಹತ್ರಾಸ್ ಅತ್ಯಾಚಾರ ಕೊಲೆ ಪ್ರಕರಣ
ಹಥ್ರಾಸ್ ದಲಿತ ಯುವತಿಯ ಅತ್ಯಾಚಾರ, ಕೊಲೆ ನಡೆಸಿರುವ ಆರೋಪಿಗಳನ್ನು ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ತುಮಕೂರಿನಲ್ಲಿ ಕರವೇ ಕಾರ್ಯಕರ್ತರು ಆರೋಪಿಸಿದರು.
ತುಮಕೂರಿನಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಯಿತು
ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಆದರೆ, ಇತ್ತೀಚೆಗೆ ಸರ್ಕಾರ ಆರೋಪಿಗಳಿಗೆ ಶಿಕ್ಷೆ ವಿಧಿಸುವ ಬದಲು, ರಕ್ಷಿಸುವ ಕಾರ್ಯ ಮಾಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರವೂ ಸಹಕಾರ ನೀಡುವಂತೆ ವರ್ತಿಸುತ್ತಿರುವುದು ವಿಷಾದನೀಯ ಎಂದರು.
ಹಥ್ರಾಸ್ ಅತ್ಯಾಚಾರ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.