ತುಮಕೂರು: ಬಡ ಜನರಿಗೆ ಭೂಮಿ ಮತ್ತು ವಸತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟ ಕಾಲ ಪ್ರತಿಭಟನೆಗೆ ವಿವಿಧ ಜನಪರ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಪ್ರತಿ ತಿಂಗಳು ಮುಖ್ಯ ಕಾರ್ಯದರ್ಶಿಯವರ ಮೂಲಕ ವಸತಿ ವಂಚಿತರಿಗೆ ಭೂಮಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು. ಕಳೆದ ತಿಂಗಳಿನಲ್ಲಿ 36 ಎಕರೆಯನ್ನು ನಿವೇಶನ ರಹಿತ ರೈತರಿಗೆ ನೀಡಲಾಗಿದ್ದು, ಹಂತಹಂತವಾಗಿ ನಿವೇಶನ ರಹಿತ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.