ತುಮಕೂರು:ಬಿಜೆಪಿ ಸರ್ಕಾರ ರಚನೆಯಾಗಿ ಅನರ್ಹಗೊಂಡಿರುವ 17 ಶಾಸಕರು ಕಾರಣವೆಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿರುವ ಹೇಳಿಕೆಯನ್ನು ಒಪ್ಪಿಕೊಂಡಿರುವುದರಿಂದ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ - latest protest for Yeddyurappas resign
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
![ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-4969471-thumbnail-3x2-tmk.jpg)
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ ಮಾತನಾಡಿ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿರುವ ಧ್ವನಿ ತನ್ನದೇ ಎಂದು ಮುಖ್ಯಮಂತ್ರಿ ಅವರೇ ಒಪ್ಪಿಕೊಂಡಿದ್ದಾರೆ. ಅನರ್ಹ ಶಾಸಕರಿಗೆ ಪಕ್ಷದ ಹಿರಿಯ ಮುಖಂಡರು ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ, ಹಾಗಾಗಿಯೇ ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಹೇಳಿಕೆ ನೀಡಿರುವುದರಿಂದ ನೈತಿಕ ಹೊಣೆಹೊತ್ತು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಅಷ್ಟೇ ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಹಿರಿಯ ಮುಖಂಡರು ಒಂದು ಆಡಳಿತ ಸರ್ಕಾರವನ್ನು ಕೆಡವಲು ಯಾವೆಲ್ಲ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನರು ಗಮನಿಸುತ್ತಿದ್ದು, ಮುಂದಿನ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇನ್ನು, ಮಾಜಿ ಶಾಸಕ ರಫೀಕ್ ಅಹಮದ್ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸರ್ಕಾರದಿಂದ ವಜಾಗೊಳಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವುದೆಂದು ತಿಳಿಸಿದರು.