ತುಮಕೂರು:ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ರನ್ನು ಮತ್ತೆ ಅದೇ ಜಾಗಕ್ಕೆ ಮರು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಪಾಲಿಕೆ ಆಯುಕ್ತ ಭೂಬಾಲನ್ ಬೇಕೇಬೇಕು.. ತುಮಕೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ - Commissioner of Tumkur Metropolitan. Bhoobalan
ಭೂಬಾಲನ್ ಚುನಾವಣಾ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಚುನಾವಣೆ ನಡೆದ ನಂತರ ನಗರದಕ್ಕೆ ಹಿಂದಿರುಗಲಿದ್ದಾರೆ ಎಂದು ಭರವಸೆ ನೀಡಿದ್ದರು. ಆದರೆ, ಅದು ಹುಸಿಯಾಗಿದ್ದು, ಶೀಘ್ರವೇ ಅವರನ್ನು ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಆಯುಕ್ತ ಭೂಬಾಲನ್ ಬೇಕೆ ಬೇಕು, ತುಮಕೂರಿನಲ್ಲಿ ಪ್ರತಿಭಟನೆ
ನಗರಾಭಿವೃದ್ಧಿ ಮತ್ತು ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕಾಮಗಾರಿಗಳಿಗೆ ಅರ್ಥ ಬರಬೇಕಾದರೆ ಅವರು ನಗರಕ್ಕೆ ವರ್ಗಾವಣೆಯಾಗಿ ಬರಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಧುಸ್ವಾಮಿ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗದೆ, ಜಿಲ್ಲಾ ಕೇಂದ್ರದಲ್ಲಿ ಇದ್ದುಕೊಂಡು ಕೆಲಸ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.