ಕರ್ನಾಟಕ

karnataka

ETV Bharat / state

ಕೊರೊನ ಭೀತಿ: ಜನಸಂಪರ್ಕ ಸಭೆ ಮುಂದೂಡಿಕೆ.. - Public Relations Meeting Postponed

ಕೊರೊನ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸಂಪರ್ಕ ಸಭೆ ಮುಂದೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ. ನ. ವಂಶಿಕೃಷ್ಣ ತಿಳಿಸಿದ್ದಾರೆ.

Public Relations Meeting Postponed
ಜನಸಂಪರ್ಕ ಸಭೆ ಮುಂದೂಡಿಕೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ. ನ. ವಂಶಿಕೃಷ್ಣ

By

Published : Mar 16, 2020, 3:29 PM IST

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸಂಪರ್ಕ ಸಭೆಯನ್ನ ಕೊರೊನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ. ನ. ವಂಶಿಕೃಷ್ಣ

ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ. ನ. ವಂಶಿಕೃಷ್ಣ , ಈಗಾಗಲೇ ಪಾವಗಡ ಮತ್ತು ಶಿರಾ ತಾಲೂಕಿನಲ್ಲಿ ಜನಸಂಪರ್ಕ ಸಭೆ ನಡೆಸಲಾಗಿದೆ. ಮಾರ್ಚ್ ತಿಂಗಳಲ್ಲಿ ಉಳಿದೆಡೆ ಜನಸಂಪರ್ಕ ಸಭೆ ನಡೆಸಬೇಕಾಗಿತ್ತು. ಆದರೆ, ಹೆಚ್ಚು ಜನರು ಸಭೆಯಲ್ಲಿ ಇರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದರು.

ಅಲ್ಲದೇ ಕೊರೊನ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬಂದ ನಂತರ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.


ABOUT THE AUTHOR

...view details