ಕರ್ನಾಟಕ

karnataka

ETV Bharat / state

ಹಲ್ಲೆಕೋರರನ್ನ ಶಿಕ್ಷಿಸಿ; ತುಮಕೂರಿನಲ್ಲಿ ಆಶಾ ಕಾರ್ಯಕರ್ತೆಯರ ಒತ್ತಾಯ - ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ

ಆಶಾ ಕಾರ್ಯಕರ್ತೆಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದರೆ ನೇರವಾಗಿ ಬಂದು ನನ್ನನ್ನು ಸಂಪರ್ಕಿಸಿ, ಸ್ಯಾನಿಟೈಸರ್ ಮತ್ತು ಗ್ಲೌಸ್ ಗಳನ್ನು ಈಗಾಗಲೇ ನೀಡಲಾಗಿದೆ. ಎಲ್ಲರೂ ಉತ್ತಮವಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೀರಿ. ನಿಮ್ಮ ಸಹಕಾರದಿಂದಲೇ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದರು.

Punish the Assailants of Corona Warriors appeal
ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್

By

Published : May 29, 2020, 4:57 PM IST

ತುಮಕೂರು: ಕೋವಿಡ್-19 ಫ್ರಂಟ್ ಲೈನ್ ವಾರಿಯರ್ಸ್​ಗಳಾದ ಆಶಾ ಕಾರ್ಯಕರ್ತೆಯರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಿ, ಹಲ್ಲೆಗೆ ಒಳಗಾದವರಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಆಶಾ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ದೇಶದೆಲ್ಲೆಡೆ ಕೊರೊನಾ ಹಬ್ಬಿದ್ದು, ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು, ಕೋವಿಡ್-19 ವಿರುದ್ಧ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆಗಳು ದಿನೇ ದಿನೆ ಹೆಚ್ಚಾಗುತ್ತಿವೆ, ಕೆಲ ಪುಂಡರ ಹಾಗೂ ಪಾನಮತ್ತರ ಕೆಂಗಣ್ಣಿಗೆ ಆಶಾ ಕಾರ್ಯಕರ್ತೆಯರು ಗುರಿಯಾಗುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ತಿಳಿಸಲಾಯಿತು.

ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್
ಆಶಾ ಕಾರ್ಯಕರ್ತೆಯರಿಗೆ ಮಾರ್ಚ್ ತಿಂಗಳಿನಿಂದ ಕೋವಿಡ್-19 ಕಾರ್ಯ ನಿಯೋಜನೆ ಇರುವಷ್ಟು ಅವಧಿಗೆ ವಿಶೇಷ ಪ್ಯಾಕೇಜ್, ಅಂದರೆ ಮಾಸಿಕ 10 ಸಾವಿರ ರೂ ಘೋಷಣೆ ಮಾಡಬೇಕು, ಅಗತ್ಯ ಇರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್​​ಗಳನ್ನು ನೀಡಬೇಕು, ಅಲ್ಲದೇ ಸಾವಿಗೀಡಾದ ಆಶಾ ಕುಟುಂಬಕ್ಕೆ ನೀಡಿರುವ 50ಲಕ್ಷ ರೂ, ವಿಮೆ ಸೌಲಭ್ಯವನ್ನು ಕೋವಿಡ್-19 ಸೇವೆಯಲ್ಲಿರುವಾಗ ಸಾವಿಗೀಡಾದ ಆಶಾ ಕುಟುಂಬಕ್ಕೆ ನೀಡಬೇಕು ಎಂದು ತಿಳಿಸಿದರು.

ಈ ವೇಳೆ, ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಆಶಾ ಕಾರ್ಯಕರ್ತೆಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದರೆ ನೇರವಾಗಿ ಬಂದು ನನ್ನನ್ನು ಸಂಪರ್ಕಿಸಿ, ಸ್ಯಾನಿಟೈಸರ್ ಮತ್ತು ಗ್ಲೌಸ್ ಗಳನ್ನು ಈಗಾಗಲೇ ನೀಡಲಾಗಿದೆ. ಎಲ್ಲರೂ ಉತ್ತಮವಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೀರಿ. ನಿಮ್ಮ ಸಹಕಾರದಿಂದಲೇ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಯನ್ನು ಕಂಡಿದ್ದೇವೆ ಎಂದರು.

ನಂತರ ಮಾತನಾಡಿ, ನನ್ನ ಕಡೆಯಿಂದ ನಿಮಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನೀವು ಮಾಡುತ್ತಿರುವಂತಹ ಉತ್ತಮವಾದ ಕಾರ್ಯಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗಿ ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.

ABOUT THE AUTHOR

...view details