ಕರ್ನಾಟಕ

karnataka

ETV Bharat / state

ತುಮಕೂರಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಹೊಡೆದಾಟ: ನಾಲ್ವರಿಗೆ ಗಾಯ, ಕಂದಮ್ಮಗಳ ಆಕ್ರಂದನ - ತುಮಕೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ವೈಯುಕ್ತಿಕ ಕಾರಣಗಳಿಗಾಗಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತುಮಕೂರು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

quarel-between-two-group-4-injured
ನಾಲ್ವರಿಗೆ ಗಾಯ

By

Published : Jun 13, 2020, 12:16 PM IST

ತುಮಕೂರು: ವೈಯುಕ್ತಿಕ ಕಾರಣಗಳಿಗಾಗಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ನಾಲ್ವರು ಗಾಯಗೊಂಡಿರುವ ಘಟನೆ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತುಮಕೂರಿನಲ್ಲಿ ವೈಯಕ್ತಿಕ ಕಾರಣಕ್ಕೆ ಘರ್ಷಣೆ ನಡೆದಿದ್ದು, ನಾಲ್ವರಿಗೆ ಗಾಯಗಳಾಗಿವೆ.

ಘಟನೆಯಲ್ಲಿ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ನಡೆಯುತ್ತಿದ್ದ ವೇಳೆ ತಂದೆಗೆ ಏಟು ಬಿದ್ದಿರುವುದನ್ನು ಕಂಡು ಪುಟ್ಟ ಮಕ್ಕಳು ಕಣ್ಣೀರಿಡುತ್ತಿದ್ದ ದೃಶ್ಯ ಹೃದಯಹಿಂಡುವಂತಿತ್ತು. ಪುಟ್ಟ ಬಾಲಕನೊಬ್ಬ 'ಹೊಡೆಯಬೇಡಿ..' ಎಂದು ಕೈಮುಗಿಯುತ್ತಿದ್ದ ದೃಶ್ಯ ನೋಡುಗರ ಮನಕಲಕಿತು.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ABOUT THE AUTHOR

...view details