ತುಮಕೂರು: ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಂಡವನನ್ನ ಮತ್ತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸಿರುವುದು ಸರಿಯಲ್ಲ, ಇವರನ್ನು ಬಿಟ್ಟರೆ ಬೇರೆ ಯಾರು ಸಮರ್ಥವಾದ ಅಭ್ಯರ್ಥಿ ಇಲ್ಲವೇ, ಹಾಗಾಗಿ ಇವರ ವಿರುದ್ಧವಾಗಿ ಸತ್ಯಶೋಧನಾ ಸಮಿತಿಗೆ ದೂರು ನೀಡಲಾಗಿದೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ತಿಳಿಸಿದರು.
ಜಿಲ್ಲಾಧ್ಯಕ್ಷ ರಾಮಕೃಷ್ಣ ಅವರ ಬಗ್ಗೆ ಸತ್ಯ ಶೋಧನಾ ಸಮಿತಿಗೆ ದೂರು ನೀಡಲಾಗಿದೆ. ಈ ಜಿಲ್ಲಾಧ್ಯಕ್ಷರು ವೇಶ್ಯಾವಾಟಿಕೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದವರ , ಇವರನ್ನು ಮತ್ತೆ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸಿರುವುದು ಸರಿಯಲ್ಲ, ಇವರನ್ನು ಬಿಟ್ಟರೆ ಬೇರೆ ಯಾರು ಸಮರ್ಥ ಅಭ್ಯರ್ಥಿ ಇಲ್ಲವೇ ಎಂದು ಪ್ರಶ್ನಿಸಿದರು. ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ 10 ಪರ್ಸೆಂಟ್ ಗಿರಾಕಿಯ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ತಲೆ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಇಂತಹ ವ್ಯಕ್ತಿಯನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೂರಿಸಿದರೆ ಪಕ್ಷ ಹೇಗೆ ಅಭಿವೃದ್ಧಿಯಾಗುತ್ತದೆ ಬೇರೆ ಹಿರಿಯ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ವತಿಯಿಂದ ಸತ್ಯಶೋಧನಾ ಸಮಿತಿ ಭೇಟಿ ನೀಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಚರ್ಚೆ ನಡೆಸಿತು.ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ಕಾರಣ ರಾಜ್ಯದಲ್ಲಿ ಒಂದು ಶೋಧನಾ ಸಮಿತಿಯನ್ನು ರಚನೆ ಮಾಡಿ, ಕಾಂಗ್ರೆಸ್ ಪಕ್ಷದ ಸೋಲಿಗೆ ಹಾಗೂ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಮತ್ತೆ ಪಕ್ಷವನ್ನು ಸದೃಢಗೊಳಿಸಲು ಈ ಸಮಿತಿ ರಚಿಸಲಾಗಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.