ತುಮಕೂರು:ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಕಾಂಗ್ರೆಸ್ ಗೆದ್ದ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಯೋಜನೆಯನ್ನು ಅಲ್ಲಿನ ಮುಖ್ಯಮಂತ್ರಿಗಳಿಂದ ಜಾರಿಗೆ ತರಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರಳಿ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರೇ ದೇಶದ ಭವಿಷ್ಯ ರೂಪಿಸಲಿದ್ದಾರೆ. ಮಹಿಳಾ ಸಬಲೀಕರಣ ಸೇರಿದಂತೆ ಯುವ ಸಮೂಹವನ್ನು ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಸಲಿದ್ದಾರೆ. ಈಗಾಗಲೇ ಹಲವಾರು ಸಭೆಗಳಲ್ಲಿ ಯುವಕರೊಂದಿಗೆ ಹಲವು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪರ್ಧಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕ ರಫೀಕ್ ಅಹಮದ್ ಸೇರಿದಂತೆ ಇನ್ನಿತರರು ಹಾಜರಿದ್ದರು.