ತುಮಕೂರು:ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಕೊರಟಗೆರೆ ತಾಲೂಕಿನ ಜಯಮಂಗಲಿ ನದಿ ಉಕ್ಕಿ ಹರಿಯುತ್ತಿದ್ದು, ನದಿಗೆ ಹೊಂದಿಕೊಂಡಂತೆ ಇರುವ ಚನ್ನಸಾಗರ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಗ್ರಾಮಸ್ಥರೆಲ್ಲರೂ ಮನೆ ಬಿಟ್ಟು ಓಡಿ ಬಂದಿದ್ದಾರೆ. ಕೆಲ ಜನರು ಮನೆಗಳ ಮೇಲೆಯೇ ಆಶ್ರಯ ಪಡೆದಿದ್ದಾರೆ.
ಗ್ರಾಮಕ್ಕೆ ಡೌಡಾಯಿಸಿರುವ ಜಿಲ್ಲಾಧಿಕಾರಿ ಸೇರಿದಂತೆ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಜೆಸಿಬಿಯಲ್ಲಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಮೃತ:ಕುಣಿಗಲ್ ತಾಲೂಕಿನ ಹುತ್ರಿದುರ್ಗ ಬಳಿಯ ಶಿವಪುರ ಗ್ರಾಮದಲ್ಲಿ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜು (28) ಸಾವನ್ನಪ್ಪಿರುವ ಯುವಕ.