ತುಮಕೂರು :ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ 9 ದಿನಗಳ ಕಾಲ ಎಲ್ಲಾ ಜಿಲ್ಲೆಗಳ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಲು ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಜುಲೈ 23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮದ್ ತಿಳಿಸಿದರು.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5 ಪ್ರದೇಶಗಳ ಪ್ರವಾಸ ಮಾಡಿ 25 ಜಿಲ್ಲೆಯ ಮುಖಂಡರ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.