ಕರ್ನಾಟಕ

karnataka

ETV Bharat / state

ಜಿಲ್ಲೆಯಲ್ಲಿ 118 ಶಂಕಿತರ ವರದಿ ಬಾಕಿ - ತುಮಕೂರಿನಲ್ಲಿ ಕೊರೊನಾ ಶಂಕಿತರು

ತುಮಕೂರಿನಲ್ಲಿ 480 ಜನರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಎರಡು ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಗುಣಮುಖರಾಗಿದ್ದು, ಮನೆಗೆ ವಾಪಸ್​​​​ ಕಳುಹಿಸಲಾಗಿದೆ ಎಂದು ಹೇಳಿದರು.

Report of 118 suspects pending in the district
ಜಿಲ್ಲೆಯಲ್ಲಿ 118 ಶಂಕಿತರ ವರದಿ ಬಾಕಿ

By

Published : Apr 19, 2020, 12:04 AM IST

ತುಮಕೂರು: ಜಿಲ್ಲೆಯಲ್ಲಿ 118 ಶಂಕಿತರ ತಪಾಸಣೆಯ ವರದಿ ಬಾಕಿ ಇದೆ. ಒಟ್ಟು 480 ಶಂಕಿತರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ತಿಳಿಸಿದರು.

ಜಿಲ್ಲೆಯಲ್ಲಿ 118 ಶಂಕಿತರ ವರದಿ ಬಾಕಿ

24 ಶಂಕಿತರು ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರು ಮನೆಯಿಂದ ಹೊರಗಡೆ ಬರದಂತೆ ಸೂಚಿಸಲಾಗಿದೆ. 307 ಮಂದಿಯನ್ನು ಐಸೋಲೇಷನ್​ನಲ್ಲಿ ಇಡಲಾಗಿದೆ. ಈಗಾಗಲೇ 346 ಶಂಕಿತರ 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಇಲ್ಲಿಯವರೆಗೆ 687 ಶಂಕಿತರ ಗಂಟಲು ದ್ರವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 562 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ ಎಂದು ತಿಳಿಸಿದರು.

2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details