ಕರ್ನಾಟಕ

karnataka

ETV Bharat / state

ತುಮಕೂರು: ಲೋಕಾಯುಕ್ತ ವ್ಯವಸ್ಥೆ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ - ಬಿ.ಎಸ್. ಯಡಿಯೂರಪ್ಪ

ಲೋಕಾಯುಕ್ತ ಬದಲಿಗೆ ಎಸಿಬಿ ಸಂಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಸಾಕಷ್ಟು ಪ್ರಕರಣಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಎಸಿಬಿ ಅಧಿಕಾರಿಗಳು ಹೇಳಿ ತಿರಸ್ಕಾರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ನ್ಯಾಯ ಸಿಗಲು ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Lokayukta system
ಲೋಕಾಯುಕ್ತ ವ್ಯವಸ್ಥೆ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ

By

Published : Jun 29, 2020, 7:20 PM IST

Updated : Jun 29, 2020, 8:09 PM IST

ತುಮಕೂರು:ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಎಸಿಬಿ ರದ್ದುಮಾಡಿ, ರಾಜ್ಯದಲ್ಲಿ ಲೋಕಾಯುಕ್ತ ಬಲ ಗೊಳಿಸುವುದಾಗಿ ಬಿ.ಎಸ್. ಯಡಿಯೂರಪ್ಪ ಮಾತು ಕೊಟ್ಟಿದ್ದರು, ಅದನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು.

ಲೋಕಾಯುಕ್ತ ವ್ಯವಸ್ಥೆ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ

ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ ಮಾತನಾಡಿ, ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಬಲಯುತವಾಗಿದ್ದು, ಅದನ್ನು ಬಲಹೀನಗೊಳಿಸಲಾಗಿದೆ ಎಂದು ಆರೋಪಿಸಿದರು.

ಲೋಕಾಯುಕ್ತ ಬದಲಿಗೆ ಎಸಿಬಿ ಸಂಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಸಾಕಷ್ಟು ಪ್ರಕರಣಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಎಸಿಬಿ ಅಧಿಕಾರಿಗಳು ಹೇಳಿ ತಿರಸ್ಕಾರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ನ್ಯಾಯ ಸಿಗಲು ತೊಂದರೆಯಾಗುತ್ತಿದೆ. ಆದ್ದರಿಂದ ಯಡಿಯೂರಪ್ಪನವರು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಲೋಕಾಯುಕ್ತ ಸಂಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

Last Updated : Jun 29, 2020, 8:09 PM IST

ABOUT THE AUTHOR

...view details