ತುಮಕೂರು :ಜಿಲ್ಲೆಯ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ನೂರಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಹೆಚ್ಚು ಮುಂದೆ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ಮಹಿಳಾ ಕಾರ್ಯಕರ್ತೆಯರೂ ಸಾಲಾಗಿ ನಿಂತು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.