ತುಮಕೂರು :ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ನೆರವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳು ನೀಡಿದ್ದಾರೆ.
ಕೊರೊನಾ ವಿರುದ್ಧದ ಹೋರಾಟಕ್ಕೆ ಸಿದ್ಧಗಂಗಾ ಮಠದಿಂದ 50 ಲಕ್ಷ ರೂ. ನೆರವು - ಕೊರೊನಾ ವಿರುದ್ಧದ ಹೋರಾಟ
ಕೊರೊನಾ ವಿರುದ್ಧದ ಹೋರಾಟಕ್ಕೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ 50 ಲಕ್ಷ ರೂಪಾಯಿ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್ ಮೂಲಕ ನೀಡಿದರು.
ಸಿದ್ದಗಂಗಾ ಮಠದಿಂದ 50 ಲಕ್ಷ ರೂಪಾಯಿ ನೆರವು
ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಶ್ರೀಸಿದ್ಧಗಂಗಾ ಮಠ ಸಿದ್ಧಲಿಂಗ ಸ್ವಾಮೀಜಿಗಳು 50 ಲಕ್ಷದ ರೂಪಾಯಿಯ ಪರಿಹಾರದ ಚೆಕ್ ನ ಸಚಿವ ಮಾಧುಸ್ವಾಮಿ ಅವರಿಗೆ ಹಸ್ತಾಂತರಿಸಿದರು.
ಮಠದ ವತಿಯಿಂದ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸೇರಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.