ತುಮಕೂರು: ಸರಿಯಾಗಿ ಊಟ ಕೊಡುತ್ತಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವಾರ್ಡನ್‌ವೊಬ್ಬರನ್ನು ರಕ್ಷಿಸಿರುವ ಘಟನೆ ಕೊರಟಗೆರೆ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ವಾರ್ಡನ್ ತಾರಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಆತ್ಮಹತ್ಯೆಗೆ ಯತ್ನಿಸಿದ ವಸತಿ ಶಾಲಾ ವಾರ್ಡನ್, ಪಾರು ಮಾಡಿದ ಸಿಬ್ಬಂದಿ - school warden tried to commit suicide
ವಿದ್ಯಾರ್ಥಿಗಳ ಆರೋಪಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಾರ್ಡನ್‌ನನ್ನು ಸಹಸಿಬ್ಬಂದಿ ರಕ್ಷಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಶಾಲಾ ವಾರ್ಡನ್ ರಕ್ಷಣೆ
ವಿಶ್ವ ಯೋಗ ದಿನಾಚರಣೆಯ ಸಂದರ್ಭ ಕೊಠಡಿಯೊಂದರಲ್ಲಿ ಬಾಗಿಲು ಹಾಕಿಕೊಂಡಿದ್ದ ತಾರಾ ಅವರನ್ನು ಇತರೆ ಸಿಬ್ಬಂದಿ ಎಷ್ಟೇ ಸಮಾಧಾನಪಡಿಸಿದರೂ ಅವರು ಬಾಗಿಲು ತೆರೆದಿರಲಿಲ್ಲ. ಇದರಿಂದ ಅನುಮಾನಗೊಂಡು ಕೊಠಡಿಯ ಬಾಗಿಲು ಒಡೆದು ಅವರನ್ನು ರಕ್ಷಿಸಲಾಯಿತು. ಈ ಹಿಂದೆ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ : ತಲೆಮರೆಸಿಕೊಂಡಿದ್ದ ಆರೋಪಿಗಳು ಅರೆಸ್ಟ್