ತುಮಕೂರು :ನಗರದಲ್ಲಿ ನಿನ್ನೆ ಏಕಾಏಕಿ ಪೊಲೀಸರು ಆಗಮಿಸಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದರು. ಆದರೆ, ಇಂದು ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ವಹಿವಾಟನ್ನು ಸ್ಥಗಿತಗೊಳಿಸಿದ್ದಾರೆ.
ನಗರದ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನಡೆಯುವ ಎಂ ಜಿ ರಸ್ತೆ, ಬಸ್ಟ್ಯಾಂಡ್ ರಸ್ತೆ, ಬಿಹೆಚ್ ರಸ್ತೆ ಸೇರಿ ಬಹುತೇಕ ಎಲ್ಲಾ ರಸ್ತೆಗಳಲ್ಲಿ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.
ಸ್ವಯಂ ಪ್ರೇರಿತ ಬಂದ್ಗೆ ಮುಂದಾದ ವ್ಯಾಪಾರಸ್ಥರು.. ನಗರದಲ್ಲಿ ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳ ಸಂಚಾರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಿರಲಿಲ್ಲ. ಆಟೋಗಳ ಸಂಚಾರ ಕೂಡ ಅಭಾದಿತವಾಗಿತ್ತು. ಸಾರ್ವಜನಿಕರು ಕೂಡ ಸಹಜ ಸ್ಥಿತಿಯಲ್ಲಿ ರಸ್ತೆಗಳಲ್ಲಿ ಓಡಾಡುತ್ತಿದ್ದರು.
ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳು ನಡೆಯದಿರುವುದರಿಂದ ಪ್ರಮುಖ ರಸ್ತೆಗಳಲ್ಲಿ ಜನಸಂಚಾರ ಕೂಡ ವಿರಳವಾಗಿತ್ತು. ಹೋಟೆಲ್ಗಳು, ಬೇಕರಿಗಳು ಹಾಗೂ ತರಕಾರಿ ಅಂಗಡಿಗಳು ತೆರೆದಿದ್ದವು. ಬಹುತೇಕ ಎಲ್ಲಾ ಗ್ರಾಮೀಣ ಭಾಗದಲ್ಲಿಯೂ ಕೂಡ ಇದೇ ರೀತಿಯ ಸ್ಥಿತಿ ಮುಂದುವರೆದಿದೆ.
ಓದಿ:ತಜ್ಞರು ವರದಿ ನೀಡಿದ್ದರೂ ಕೇಂದ್ರ, ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಲಿಲ್ಲ: ಸಿದ್ದರಾಮಯ್ಯ ಆಕ್ರೋಶ