ತುಮಕೂರು :ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಕೆರೆಗಳು ತುಂಬಿ ಹರಿಯುತ್ತಿವೆ. ಜಲರಾಶಿಯ ನಡುವೆ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಕಸಂದ್ರ ಅಣೆಗೆ ಬಳಿ ನಡೆದಿದೆ.
ದಯಾನಂದ (23) ಎಂಬಾತನೆ ಮೃತ ಯುವಕನಾಗಿದ್ದಾನೆ. ಈತ ಬರ್ಕನಾಲ್ ಗ್ರಾಮದ ಯುವಕ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಶವ ಹುಡುಕಾಟ ಕಾರ್ಯದಲ್ಲಿ ತೊಡಗಿದ್ದಾರೆ.