ತುಮಕೂರು:ಶಿರಾ ಉಪ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಇನ್ನು ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಲು ಸಿದ್ಧತೆ ನಡೆಸಿವೆ. ಈ ನಡುವೆ ಚುನಾವಣಾ ನೀತಿ ಸಂಹಿತೆಯಲ್ಲಿ ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದ್ದು, ಆ ಮೂಲಕವೂ ಪ್ರಚಾರ ನಡೆಸುತ್ತಿದೆ.
ಶಿರಾ ಉಪ ಸಮರ: ಪ್ರಚಾರ ಸಾಮಗ್ರಿಯಾಗಿ ಪರಿವರ್ತನೆಗೊಂಡ ಮಾಸ್ಕ್ಗಳು!
ಚುನಾವಣಾ ಪ್ರಚಾರದ ಸಾಮಗ್ರಿಯಾಗಿ ಮಾಸ್ಕ್ ಬಳಕೆ ಮಾಡಲಾಗುತ್ತಿದೆ. ಮಾಸ್ಕ್ ಮೇಲೆ ಅಭ್ಯರ್ಥಿಯ ಭಾವಚಿತ್ರ ಹಾಗೂ ಪಕ್ಷದ ಚಿಹ್ನೆಯನ್ನು ಮುದ್ರಿಸಿ ಕಾರ್ಯಕರ್ತರಿಗೆ ವಿತರಿಸಲಾಗುತ್ತಿದೆ.
ಇದುವರೆಗೂ ವಿವಿಧ ರೀತಿಯ ಮಾಸ್ಕ್ಗಳು ಮಾರುಕಟ್ಟೆಯಲ್ಲಿ ದೊರೆಯುತ್ತಿವೆ. ಇದೀಗ ಮಾಸ್ಕ್ಗಳನ್ನು ಉಪ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಕುತೂಹಲಕಾರಿಯಾಗಿದೆ. ಪ್ರಚಾರದ ಸಾಮಗ್ರಿಯಾಗಿ ಮಾಸ್ಕ್ ಬಳಕೆ ಮಾಡಲಾಗುತ್ತಿದೆ. ಮಾಸ್ಕ್ ಮೇಲೆ ಅಭ್ಯರ್ಥಿಯ ಭಾವಚಿತ್ರ ಹಾಗೂ ಪಕ್ಷದ ಚಿಹ್ನೆಯನ್ನು ಮುದ್ರಿಸಿ ಕಾರ್ಯಕರ್ತರಿಗೆ ವಿತರಿಸಲಾಗುತ್ತಿದೆ. ಅಲ್ಲದೆ ಮತದಾರರಿಗೂ ಕೂಡ ಈ ಮಾಸ್ಕ್ ವಿತರಿಸಲಾಗುತ್ತಿದೆ.
ಕ್ಷೇತ್ರದಲ್ಲಿ ಮೊದಲಿಗೆ ಕಾಣಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ಮಾಸ್ಕ್ಗಳ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹಾಗೂ ಪಕ್ಷದ ಚಿಹ್ನೆ ಹಸ್ತದ ಗುರುತನ್ನು ಪ್ರಿಂಟ್ ಮಾಡಲಾಗಿದೆ. ಈ ಮಾಸ್ಕ್ಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಧರಿಸಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ.