ತುಮಕೂರು:ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇನ್ನೊಂದೆಡೆ ಪ್ರಮುಖ ಮೂರು ಪಕ್ಷಗಳು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿವೆ ಎಂದು ಫ್ಲೈಯಿಂಗ್ ಸ್ಕ್ವಾಡ್ ಟೀಮ್ ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ಅಲ್ಲದೆ ಮೆರವಣಿಗೆ ನಡೆಸಲು ಅನುಮತಿ ಪಡೆದಿರುವ ಪಕ್ಷದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದೆ.
ಬಿಜೆಪಿ ವಿರುದ್ಧ ದೂರು:
ಅಕ್ಟೋಬರ್ 16 ರಂದು ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶಿರಾ ಮಿನಿ ವಿಧಾನಸೌಧದ ಬಳಿ ಅತಿ ಹೆಚ್ಚು ಜನರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬಿಜೆಪಿಯ ಕಾರ್ಯಕರ್ತರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿರುವುದನ್ನು ಗಮನಿಸಿದೆ. ಅಲ್ಲದೆ ಸ್ಥಳದಲ್ಲಿದ್ದ ಪೊಲೀಸರು ಮಿನಿವಿಧಾನಸೌಧದ ಬಳಿ ಜಮಾಯಿಸಿದ್ದ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿದ್ದರು. ಈ ಕುರಿತಾದ ವಿಡಿಯೋ ರೆಕಾರ್ಡಿಂಗ್ಗಳು ಚುನಾವಣಾ ಶಾಖೆಯಲ್ಲಿ ಲಭ್ಯವಿದ್ದು, ನಿಯಮಾವಳಿಗಳು ಉಲ್ಲಂಘನೆ ಆಗಿರುವುದರಿಂದ ಈ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಶಿರಾ ಪೊಲೀಸ್ ಠಾಣೆಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ತಿರುಮಲ ದೂರು ನೀಡಿದ್ದಾರೆ. ಮಾಸ್ಕ್ಗಳನ್ನು ಧರಿಸಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಸರ್ ಬಳಸಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದಾಗಿ ಈಗಾಗಲೇ ಅನುಮತಿ ಪಡೆದಿದ್ದ ಶಿರಾ ಬಿಜೆಪಿ ನಗರಾಧ್ಯಕ್ಷ ವಿಜಯರಾಜ್ ವಿರುದ್ಧ ದೂರು ಸಲ್ಲಿಸಲಾಗಿದೆ.
ಜೆಡಿಎಸ್ ವಿರುದ್ಧ ದೂರು: