ತುಮಕೂರು :ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಘೋಷಣೆ ಮಾಡಲಾಗಿದೆ.
ಉಪ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಶಿರಾ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಟೆಂಪಲ್ ರನ್
ಶಿರಾ ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ತಮ್ಮ ಕುಟುಂಬ ಸಮೇತರಾಗಿ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.
ಹೆಸರು ಘೋಷಣೆಯಾಗುತ್ತಿದ್ದಂತೆಯೇ ಟಿ.ಬಿ ಜಯಚಂದ್ರ ತಮ್ಮ ಕುಟುಂಬ ಸಮೇತರಾಗಿ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವಲ್ಲಿ ಮಗ್ನರಾಗಿದ್ದಾರೆ. ಬೋರನಕಣಿವೆ ಯಲ್ಲಿರುವ ಶಿರಡಿ ಸಾಯಿಬಾಬಾ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಇರುವ ಕೆಂಚಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಸಹ ಶತಾಯಗತಾಯವಾಗಿ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ರಾಜಕೀಯ ಕಾರ್ಯತಂತ್ರ ಹೆಣೆದಿವೆ. ಇನ್ನು ಕಳೆದ ಬಾರಿ ಸೋಲು ಕಂಡಿದ್ದ ಕಾಂಗ್ರೆಸ್, ಈ ಬಾರಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಟಿ.ಬಿ ಜಯಚಂದ್ರ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.