ತುಮಕೂರು: ಎರಡು ರಾಷ್ಟ್ರೀಯ ಪಕ್ಷಗಳು ಎಷ್ಟೇ ಹಣದ ಹೊಳೆ ಹರಿಸಿದರೂ ಕೂಡ ಶಿರಾ ಕ್ಷೇತ್ರದ ಜನತೆ ಹಣಕ್ಕೆ ಬಲಿಯಾಗುವವರಲ್ಲ, ಶ್ರಮಕ್ಕೆ ಬೆಲೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ದೊಡ್ಡ ಆಲದಮರ ಗ್ರಾಮದಲ್ಲಿ ಪಕ್ಷದ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಸತ್ಯನಾರಾಯಣ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಕೈಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡಿದ್ದಾರೆ ಎಂದು ತಿಳಿಸಿದರು. ಈ ಬಾರಿ ಪಾಪದ ಹಣದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕ್ಷೇತ್ರದ ಜನತೆ ಸಾಬೀತು ಪಡಿಸಲಿದ್ದಾರೆ ಎಂದರು.